ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಕಾರ್ಮಿಕರಿಗೂ, ಈ ಆದೇಶ ಅನ್ವಯವಾಗಲಿದೆ.
ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲಾ ಕಾಯಂ, ಗುತ್ತಿಗೆ ಹಾಗೂ...