ಭಾರತದ ಸಂವಿಧಾನ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ, ಯುವ ನಾಯಕರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಭಾರತೀಯ ಯುವ ಕಾಂಗ್ರೆಸ್, "ರಾಷ್ಟ್ರೀಯ ಪದಾಧಿಕಾರಿಗಳ ನೂತನ ನಾಯಕತ್ವ ಅಭಿಯಾನ"ವನ್ನು ನೆಡೆಸಬೇಕೆಂದು ಘೋಷಿಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮತ್ತು...