'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....