Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ, ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ, ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿಯಾಗಿದ್ದಾರೆ. ಬಸ್‌ನ ಆಕ್ಸಲ್...
Political News: ಬೆಂಗಳೂರು: ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ.
ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರನ್ನು ಮೇಲುಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಉಸ್ತುವಾರಿಗಳ ಪಟ್ಟಿ ಹೀಗಿದೆ:
*ಯಲಹಂಕ:...
Hubli News: ಹುಬ್ಬಳ್ಳಿ: ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ಒಬ್ಬ ಸಂಸದರೂ ಧ್ವನಿ ಎತ್ತಲಿಲ್ಲ ಎಂದು ಹುಬ್ಬಳ್ಳಿ ಹೊರವಲಯದಲ್ಲಿ ಡಿಸಿಎಮ್ ಡಿ.ಕೆ ಶಿವಕುಮಾರ್ ಹೇಳಿದರು.
ವಿಜಯಪುರ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೊರವಲಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂಚೂರು ಅನುದಾನ ಕೊಡಲಿಲ್ಲ. ನೀರಾವರಿಗೆ 5,200 ಕೋಟಿ ಅನುದಾನ ಘೋಷಣೆ ಮಾಡಿತ್ತು....
Hubli News: ಹುಬ್ಬಳ್ಳಿ: ರಾಷ್ಟ್ರದ ಹಿರಿಯ ನಾಯಕರು, ಮಾಜಿ ಉಪ ಪ್ರಧಾನಿಗೆ ಭಾರತ ರತ್ನ ನೀಡಿರುವುದು ಅತ್ಯಂತ ಶ್ರೇಷ್ಠ ಗೌರವ. ಅಡ್ವಾಣಿ ಅವರಿಗೆ ಪ್ರಶಸ್ತಿ ಸಿಕ್ಕಿರೋದು ಬಹಳ ಸಂತೋಷ ತಂದಿದೆ. ಅವರಿಗೆ ಹಿಂದೆಯೆ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ಇವತ್ತು ಸಿಕ್ಕಿರೋದು ಬಹಳ ಆನಂದ ಆಗಿದೆ. ನಾನು ಅಡ್ವಾಣಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ.
ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್...
Hubli News: ಹುಬ್ಬಳ್ಳಿ: ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
2004ರಿಂದ 2014ರವರೆಗಿನ...
Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು.
ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ...
Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ...
Dharwad News: ಧಾರವಾಡ: ತರಕಾರಿ ಮಾರಾಟ ಮಾಡಲು ಬಂದ ರೈತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡದ ಹೊಸ ಎಪಿಎಂಸಿಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಲೋಕೂರ ಗ್ರಾಮದ ರೈತ ಈರಪ್ಪ ರುದ್ರಪ್ಪ ಉಡಿಕೇರಿ ಹಲ್ಲೆಗೊಳಗಾದ ರೈತನಾಗಿದ್ದು, ಐದು ಜನ ಹೊಲಸೇಲ್ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಪ್ರತಿನಿತ್ಯ ಈ ರೈತ ಎಪಿಎಂಸಿಗೆ ಬಂದು ತರಕಾರಿ ಮಾರಾಟ...
Dharwad News: ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಅಂಗನವಾಡಿ ಅಡುಗೆ ಸಹಾಯಕರು ಹಾಗೂ...