ಸಿನಿಮಾ ಸುದ್ದಿ: ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ "ರಾವೆನ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಶಾಸಕ ಗೋಪಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್...