ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಬಿರುಗಾಳಿ ಮತ್ತು ಮಳೆಯ ಪರಿಣಾಮ ಲೋಕೇಶ್, ಪರಮೇಶ್, ನಾಗರಾಜ್ ಸೇರಿದಂತೆ ಹಲವಾರು ರೈತರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು...