ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...