International News: ಗಾಜಾದ ಆಸ್ಪತ್ರೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಹಮಾಸ್ ಉಗ್ರರ ಕಮಾಂಡರ್‌ನನ್ನು, ಇಸ್ರೇಲ್ ಸೇನೆ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದೆ.
ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳು ಸೇರಿ ಸಾವಿರಕ್ಕೂ ಹೆಚ್ಚು ಜನರನ್ನು, ಈ ಉಗ್ರರ ಕಮಾಂಡರ್ ಅಹಮದ್ ಸಿಯಾಮ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ. ಅಲ್ಲದೇ, ಯುದ್ಧದ ಸಮಯದಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದ್ದನೆಂದು,...
Political News: ಡಿಸಿಎಂ ಡಿಕೆಶಿ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದು, ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆ, ರಾಮನಗರದ ಹೆಸರನ್ನ ಬದಲಾಯಿಸುವ ಡಿಕೆಶಿ ಹೇಳಿಕೆಯ ಬಗ್ಗೆ, ಹೆಚ್ಡಿಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.
ಡೂಪ್ಲಿಕೇಟ್ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ....
Political News: ಬೆಂಗಳೂರು: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದರೂ ಕಮಲ ಪಾಳಯದಲ್ಲಿ ಬೇಗುದಿ ಇನ್ನೂ ಶಮನವಾಗಿಲ್ಲ. ವಿಜಯೇಂದ್ರಗೆ ಪಕ್ಷದ ಚುಕ್ಕಾಣಿ ಕೊಟ್ಟ ನಂತರ ಹಿರಿಯರ ಅಸಮಾಧಾನ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯಾಧ್ಯಕ್ಷ ಸ್ಥಾನ ಭರ್ತಿ ಬಳಿಕ ಬಿಜೆಪಿಯಲ್ಲಿ ಒಳಗೊಳಗೇ ಕೋಪ, ತಾಪ ಮುನಿಸು ಜೋರಾಗಿದೆ..
ಕಾರ್ಯಕರ್ತರು, ಮೂರನೇ ಹಂತದ ಮುಖಂಡರಿಗೆ ಸಂಭ್ರಮ ಒಂದು ಕಡೆ ಆದರೆ,...
Political News: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ.
ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ...
Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿದ್ದಾರೆ.
ಬಿ.ವೈ. ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ ನಿರ್ಧಾರ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ...
Hubballi Political News: ಹುಬ್ಬಳ್ಳಿ: ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದನ್ನು ಸ್ವಾಗತ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಕೂ ಹೆಚ್ಚು ಸ್ಥಾನ ಗಳಿಸಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳನ್ನಾಗಿ ಮಾಡಲಾಗುವುದು...
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮೀಡಿಯಾದ ಎದುರೇ, ಪೊಲೀಸ್ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಮಾತನಾಡಿದ್ದನ್ನು, ಧಾರವಾಡ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಮುಖಂಡರಾದ, ರಜತ್ ಉಳ್ಳಾಗಡ್ಡಿ ಮಠ ಅವರು ಖಂಡಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ. ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು...
Hubballi Political News: ಹುಬ್ಬಳ್ಳಿ: ನಿಮಗೆ ಏನಿದೆ ಅಧಿಕಾರ, ಯಾವ ಆಧಾರದ ಮೇಲೆ ಹೊಡೆದೀರಿ? ನಾನೇ ನಿಮಗೆ ನಾಲ್ಕು ಗುದ್ದಿದ್ರೆ ಹೇಗೆ ಎಂದು ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್'ಗೆ ಬಾಯಿಗೆ ಬಂದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೈಯ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ.
ದೀಪಾವಳಿ ಹಬ್ಬದ ನಿಮಿತ್ತವಾಗಿ ಶುಭಾಶಯ ತಿಳಿಸಿ ಸಿಹಿ ಕೊಟ್ಟು...
Chidradurga News: ಇಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಲ್ಲಿ ವೀರ ವನಿತೆ ಓಬವ್ವನವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲಾ ಬಾಂಧವರು ಯುವಕರು ಚಿಂತಕರು ಭಾಗಿಯಾಗಿದ್ದರು. ವಿಶೇಷವಾಗಿ ಚಳ್ಳಕೆರೆ ತಾಲೂಕಿನ ಶಾಸಕರಾದ ರಘುಮೂರ್ತಿ ರವರು ಬಹಳ ಉತ್ಸುಕತೆಯಿಂದ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ...