Movie News: ಡಾ.ವಿಷ್ಣುವರ್ಧನ್ ಅಭಿನಯದ ’ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ’ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ...