Hubli Crime News: ಹುಬ್ಬಳ್ಳಿಯಲ್ಲಿ ಕಸ ಕಂಟಿಗಳಿಂದ ಆವರಿಸಿಕೊಂಡಿದ್ದ ಖಾಲಿ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೋಕುಲಧಾಮ ಪ್ರದೇಶದ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಹಳೇ ಹುಬ್ಬಳ್ಳಿ ಪೊಲೀಸರು ತಕ್ಷಣ...
Hubli: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೆಎಸ್‌ಸಿಎ ಆಶ್ರಯದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಮಾಜಿ ಟೀಂ ಇಂಡಿಯಾ ಆಟಗಾರ ವೆಂಕಟೇಶ ಪ್ರಸಾದ್ ಅವರು ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನವನ್ನು ವೀಕ್ಷಣೆ ಮಾಡಿದರು.
ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಎರಡನೇ ಹಂತದ ಪಂದ್ಯಗಳು ಜೂನ್ 27 ರಿಂದ ಜುಲೈ 3 ರವರೆಗೆ...
News: ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಇಲಾಖೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ.
ರೈಲು ಸಂಖ್ಯೆ 07341 ಹುಬ್ಬಳ್ಳಿಯಿಂದ ಜೂನ್ 20 ಮತ್ತು 21 ರಂದು ಬೆಳಿಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 11.15 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ.
ಮರುಪ್ರಯಾಣದಲ್ಲಿ 07342 ರೈಲು ಚಿಕ್ಕಮಗಳೂರಿನಿಂದ ಸಂಜೆ 5.30 ಕ್ಕೆ ಹೊರಟು...
Hubli News: ಶಿರಗುಪ್ಪಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬ್ಯುಲೆನ್ಸ್ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಬಡ ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಿರಗುಪ್ಪಿ, ಮನಕವಾಡ, ಮಂಟೂರು, ಬಂಡಿವಾಡ, ನಾಗರಹಳ್ಳಿ, ಇಂಗಳಹಳ್ಳಿ, ನೆಲವಡಿ, ಉಮಚಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಗ್ರಾಮಗಳ ಜನರು...
Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...
Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಣವಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಓಲೈಕೆ ಮಾಡುವ ಭರದಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ...
Hubli News: ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 153 ಪೇಂಟ್ ಬಕೇಟ್‌ಗಳ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಬರ್ಜರ್ ಪೇಂಟ್ಸ್ ಕಂಪನಿಯ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ವ್ಯಾಪ್ತಿಯ ಕುಂದಗೋಳ ಕ್ರಾಸ್ ಸಮೀಪದ ಎಟಿಸಿ ಗೋಡೌನ್ ಹಿಂಭಾಗದಲ್ಲಿರುವ ಬರ್ಜರ್ ಪೇಂಟ್ಸ್...
Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...
Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ ನಡೆದಿದೆ.
ಬಾಲಕಿ ಹಾಸ್ಟಲ್ ನ ಟಾಯ್ಲೆಟ್ ನಲ್ಲಿ ತಾನೇ ಹೆರಿಗೆ ಮಾಡಿಕೊಂಡು ಮಗುವನ್ನ ಕಿಟಿಕಿಯಿಂದ ಹೊರಗೆ ಎಸೆದಿದ್ದಾಳೆ. ಕಿಟಕಿಯಿಂದ ನವಜಾತ ಶಿಶು ಎಸೆದ ಹಿನ್ನೆಲೆ ಹೆಣ್ಣು ಶಿಶು ಸಾವನ್ನಪ್ಪಿದೆ....
Hubli News: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಭಿವೃದ್ಧಿಯ ಹೊಸ ಯೋಜನೆಗಳಿಗೆ ಮುಂದಾಗಿರುವ ವೇಳೆ, ಮಹಾನಗರ ಪಾಲಿಕೆ ಮಾತ್ರ ಗಡಿ ಗುರುತು ಮತ್ತು ವ್ಯಾಪ್ತಿ ವಿಸ್ತರಣೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಪಾಲಿಕೆಗೆ ಬರಬೇಕಾದ ಆದಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯದ ಅತಿವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ...