ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್ ಮಾಡಲಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಸ್ಪರ್ಧಿಸಲಿದ್ದಾರೆ.
ಬಿ. ಸುದರ್ಶನ್ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...