ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...