ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ.
ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...