ಪಾಕಿಸ್ತಾನದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪರಿಣಾಮವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆಗಳು ಮುಂದುವರಿಯಲಿವೆ. ಕೆಲ ಕಡೆಗಳಲ್ಲಿ ಗುಡುಗು-ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಪಾಕಿಸ್ತಾನದಲ್ಲಿನ ಈ ವಾಯುಭಾರ...