ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ಇಲಾಖೆಗೆ ದಂಡದ ರೂಪದಲ್ಲಿ ಬಂದ ಆದಾಯ ಹೆಚ್ಚಳವಾಗಿದೆ.
2025-26ರ ಪ್ರಸಕ್ತ ಆರ್ಥಿಕ ವರ್ಷದ 2025 ನವೆಂಬರ್ ತಿಂಗಳಿನಲ್ಲಿ ಒಟ್ಟು 67,000 ಟಿಕೆಟ್...