Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ.
ತಿಪಟೂರು...
ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣವನ್ನು ತಿಪಟೂರು ನಗರ ಪೊಲೀಸರು ಭೇದಿಸಿದ್ದಾರೆ. ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೇಮಲತಾ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರ್ (26), ಗುರುರಾಜು (33) ಮತ್ತು ಮನೋಜ್ (18)...
ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಪತ್ರಕರ್ತರಿಗೆ ಸಮಾಜವು ಗೌರವ ನೀಡುತ್ತದೆ. ಆಡಳಿತದಲ್ಲಿ ತಪ್ಪುಗಳಾಗಿದಾಗ ತಿದ್ದುವ ಜವಾಬ್ದಾರಿ ಪತ್ರಿಕಾಗಳದ್ದಾಗಿದೆ ಎಂದು ಶಾಸಕ ಹಾಗೂ ರಾಜ್ಯ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಕೆ. ಷಡಕ್ಷರಿ ಹೇಳಿದರು.
ಕಲ್ಪತರು ಕ್ರಾಂತಿ ವಾರಪತ್ರಿಕೆಯ 13ನೇ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ಲೋಕ ನಾಲ್ಕನೇ ಅಂಗವಾಗಿ...
ಇಂದು ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಪಟೂರು ನಗರದ ವಿವಿಧ ಸ್ಥಳಗಳಿಗೆ ಅಚಾನಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ತರಕಾರಿ ಮಾರುಕಟ್ಟೆ, ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್, ಬಾಲಕರ ವಿದ್ಯಾರ್ಥಿ ವಸತಿಗೃಹ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವರು ಪರಿಸ್ಥಿತಿ ನೇರವಾಗಿ ಅವಲೋಕಿಸಿದರು.
ತರಕಾರಿ ಮಾರುಕಟ್ಟೆ ಪರಿಶೀಲನೆಯ ವೇಳೆ, ದಲ್ಲಾಳಿಗಳ ಕಮಿಷನ್ ಹಾವಳಿ ಕುರಿತು ರೈತರು...
ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು.
ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...
ತುಮಕೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ತಿಪಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಮಳೆ ನೀರಿನಿಂದ ಆವೃತವಾಗಿದೆ. ಮೇಲ್ಸೇತುವೆ ಕೆಳಗಿನ ಅಂಡರ್‌ಪಾಸ್, ರಸ್ತೆಗಳಲ್ಲಿ ನೀರು ನಿಂತಿದ್ದು, ಕೆರೆಯಂತೆ ಭಾಸವಾಗ್ತಿದೆ.
ಅಕ್ಕಪಕ್ಕದ ಜಮೀನುಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಭಾರೀ ಕಷ್ಟವಾಗಿದ್ದು, ಅಕ್ಕಪಕ್ಕದ ಗ್ರಾಮಗಳ ಪ್ರಯಾಣಿಕರು ಪರದಾಡುವಂತಾಗಿದೆ.
ನವೆಂಬರ್ 19ರಿಂದ 3 ದಿನಗಳ ಕಾಲ ತಿಪಟೂರಿನಲ್ಲಿ ಕಲ್ಪೋತ್ಸವ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬೆಳಗ್ಗೆಯಿಂದ ಸಂಜೆಯವರಿಗೆ ಶಾಲಾ ಮಕ್ಕಳಿಗೆ, ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ನೌಕರರಿಗಾಗಿ ಹಲವು ಸ್ಪರ್ಧೆಗಳು, ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಎರಡು ದಿನಗಳ ಕಾಲ ಹೆಲಿಕ್ಯಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿಯ ಕಲ್ಪತರು ರತ್ನ ಪ್ರಶಸ್ತಿಯನ್ನು, ಹಿರಿಯ ನಟಿ, ಮಾಜಿ...
Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು.
ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...
Tipaturu: ತಿಪಟೂರು: ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯುಧಪೂಜೆ ಪ್ರಯುಕ್ತವಾಗಿ ಕಛೇರಿಯಲ್ಲಿ ಲಕ್ಷ್ಮಿಪೂಜೆ ಹಾಗೂ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ತಾಲ್ಲೂಕಿನ ಶಾಸಕರಾದ ಕೆ.ಷಡಕ್ಷರಿಯವರು ಕಛೇರಿಯಲ್ಲಿ ಧಾರ್ಮಿಕ ವಿಧಿವಿದಾನಗಳನುಸಾರ ನೆರವೇರಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ತಾಲ್ಲೂಕಿನ ನಾಗರಿಕರಿಗೂ ಹಾಗೂ ಜನಸಾಮಾನ್ಯರಿಗೂ ಉಪಯೋಗವಾಗುವ ಡಿ ಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರಾದ...
ತಿಪಟೂರು:ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇರೆಗೆ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ನ್ಯಾಯಾಲಯ ಅನರ್ಹಗೊಳಿಸಿದೆ.
31ನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...