ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಸಿದ್ಧತೆ ಆರಂಭಿಸಿದೆ. ಈ ಪ್ರಕ್ರಿಯೆ ನವೆಂಬರ್‌ನ ಆರಂಭದಿಂದ ಹಂತ ಹಂತವಾಗಿ ಪ್ರಾರಂಭವಾಗಲಿದ್ದು, 2026ರಲ್ಲಿ ಚುನಾವಣೆಯನ್ನು ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಮೊದಲು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ, ಆಯೋಗವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ...
ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...