State News:
ಸಿದ್ದರಾಮಯ್ಯ ಆರ್ ಎಸ್ ಎಸ್ ವಿಚಾರವಾಗಿ ಹೇಳಿದಂತಹ ಹೇಳಿಕೆಯಿಂದ ಕೇಸರಿ ಕಳಿಗಳು ಸಿದ್ದು ವಿರುದ್ಧ ಗರಂ ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಸಿದ್ದು ವಿರುದ್ಧವಾಗಿ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಆರ್‌ಎಸ್‌ಎಸ್ ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಅನ್ನು ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡುತ್ತೀರಾ? ಈ ಹಿಂದೆ ಕಾಂಗ್ರೆಸ್ ಸರಕಾರ ಮೂರು ಬಾರಿ ಆರ್‌ಎಸ್‍ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್‌ಎಸ್‍ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಪ್ರಸ್ತುತಪಡಿಸಲು ಕಾಂಗ್ರೆಸ್‍ಗೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ಗೆ ಬಹಳ ಪ್ರೀತಿಯಂತೆ ..?! ಡಿ.ಕೆ.ಶಿ ಹೀಗೆ ಹೇಳಿದ್ಯಾಕೆ..?!




