Tamil Nādu News: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಓರ್ವ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ನಡೆದಿದೆ. ಡಿಸೆಂಬರ್ 10ಕ್ಕೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಕುಸಿದು ಬೀಳುವ ದೃಶ್ಯ ಕ್ಲಾಸಿನಲ್ಲೇ ಇದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
14 ವರ್ಷದ ಅದ್ವಿತಾ ಎಂಬ ವಿದ್ಯಾರ್ಥಿನಿ, ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ ಕುಸಿದು ಬಿದ್ದ ಬಳಿಕ, ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ತಪಾಸಣೆ ನಡೆಸಿ, ವಿದ್ಯಾರ್ಥಿನಿ ಅದಾಗಲೇ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ. ಈ ಹಿಂದೆ ಬಾಲಕಿಗೆ ಹೃದಯ ಸಂಬಂಧಿ ಖಾಯಿಲೆ ಇದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ, ಬಾಲಕಿ ಸಾವನ್ನಪ್ಪಿದ್ದಾಳೆ.
ಕಾವೇರಿ ಪಾಕ್ಕಂ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ಕಳುಹಿಸಿದ್ದಾರೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.