ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ
ಚೆನ್ನೈ ಮತ್ತು ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದಲ್ಲದೆ ಶಿವಗಂಗಾ, ದಿಂಡಿಗಲ್, ಥೇಣಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಳೆಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ