Kaveri water: ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ. ಈ ಎಕ್ಸ್ ಸಾಮಾಜಿಕ ತಾಣದಲ್ಲಿ ತಮ್ಮ ಅಭಿಪ್ರಾಯ ಬರೆದಿರುವ ಅವರು; ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದಿದ್ದಾರೆ. … Continue reading Kaveri water: ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ