ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಕೆಲಕಾಲ ಆತಂಕದ ವಾತಾವರಣ ನಿರ್ಮಾಣ..

Hubli News: ಹುಬ್ಬಳ್ಳಿ: ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಹುಬ್ಬಳ್ಳಿ ಹೊರ ವಲಯದ ರಾಯನಾಳ ಸೇತುವೆ ಬಳಿ ನಡೆದಿದೆ.

ಲಾರಿ‌ಬಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದೊಂದಿಗೆ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಿದರು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದರು. ಟ್ಯಾಂಕರ್ ಸ್ಥಳಾಂತರದ ನಂತರ ಸಂಚಾರ ಯಥಾರೀತಿ‌ ಮುಂದುವರೆಯಿತು.

About The Author