ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕಾರ್ಯಪಡೆ ನಿಗಧಿತವಾಗಿ ದಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು ಎಂದರು.
ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..
ನಗರ ಸ್ಥಳೀಯ ಸಂಸ್ಥೆಗಳು 14 ನೇ ಹಾಗೂ 15 ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಟೆಂಡರ್ ಆಹ್ವಾನದ ಹಂತಲ್ಲಿದ್ದಾರೆ ಟೆಂಡರ್ ಆಹ್ವಾನ ಮಾಡಬೇಕು ಹಾಗೂ ಕಾಮಗಾರಿ ಪ್ರಾರಂಭ ಮಾಡಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ 100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ 50 ರಷ್ಟು ಈ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.
ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್
ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸಿ ಸಂಸ್ಕರಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾರ್ವತಿ ದೇವಿ, ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.