“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ.

ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ. ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಬರೆದುಕೊಂಡಿದ್ದಾರೆ.

ಜನಪ್ರಿಯ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ ಮೇ 19ರಂದು ತೆರೆಗೆ ಬಂದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಕನ್ನಡ ಚಿತ್ರರಂಗಕ್ಕೆ ಕಲಾವಿದನಾಗಿ ಮತ್ತೊಬ್ಬ ವೈದ್ಯ ಡಾ.ಪಿ.ವಿ.ಆರ್ ಲೀಲಾ ಮೋಹನ್ ಆಗಮನ

About The Author