Dakshina kannada News:
ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಗೌಸಿಯಾ ಟಿಸಿ ಪಡೆದಿದ್ದಾಳೆ. ಈ ಎಲ್ಲಾ ಘಟನೆಗಳಿಗೆ ಸಚಿವ ಬಿ.ಸಿ ನಾಗೇಶ್ ಕಾರಣ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ. ಎಂಬುದಾಗಿ ಗೌಸಿಯಾ ಹೇಳಿದ್ದಾರೆ.
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ 145 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿ ಪಡೆದಿರುವಂತಹ ಘಟನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ದ.ಕ ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಾಂತ 16% ಮುಸ್ಲಿಂ ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಟಿಸಿ ಪಡೆಯಬಹುದು ಅಂತಾ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು. ಈ ಹಿನ್ನಲೆಯಲ್ಲಿ ದ.ಕನ್ನಡ, ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆ. ಸರ್ಕಾರಿ ಕಾಲೇಜಿನಿಂದ 34%, ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ.
ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?