Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ ಅತ್ಯಾಚಾರ ಮಾಡಿದ್ದಾನೆಂದು ಸಂತ್ರಸ್ತ ಬಾಲಕಿ ಈ ಘಟನೆ ಕುರಿತು ತನ್ನ ತಾಯಿಗೆ ಮಾಹಿತಿ ನೀಡಿದಾಗ ಬಾಲಕಿಯ ತಾಯಿ ನವನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ.
ನವನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿ ತನ್ನ ತಾಯಿಯೊಂದಿಗೆ ಸಾಧನಾ ಮಾನವ ಹಕ್ಕುಗಳ ಕೇಂದ್ರಕ್ಕೆ ಮೊರೆ ಹೋಗಿದ್ದಾಳೆ. ಸಂಸ್ಥೆಯ ಅಧ್ಯಕ್ಷರಾದ ಡಾ .ಇಸಬೆಲಾ ಝೇವಿಯರ್ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಲು ಮುಂದಾಗಿದ್ದಾರೆ. ಸಂಸ್ಥೆ ಅಧ್ಯಕ್ಷರಿಗೆ ಅನೇಕ ಒತ್ತಡಗಳು ಬಂದರೂ ಕೂಡ ಮುಲಾಜಿಲ್ಲದೆ ಧಾರವಾಡ ಜಿಲ್ಲಾ ಸಂರಕ್ಷಣಾ ಘಟಕ ಜಯಶ್ರೀ ಹಾಗೂ ಬಸಲಿಂಗ ಸಂತ್ರಸ್ತೆ ವಿದ್ಯಾರ್ಥಿನಿಯೊಂದಿಗೆ ಸಮಾಲೋಚನೆ ನಡೆಸಿ ಕಾನೂನು ಕ್ರಮಕ್ಕೆ ಮುಂದಾದರು.
ಶಿಕ್ಷಕನ ಹೆಂಡತಿ ಹಾಗೂ ಅದೇ ಶಾಲೆಯ ಶಿಕ್ಷಕಿ ಸಹ ಗಂಡನ ಲೈಂಗಿಕ ದೌರ್ಜನ್ಯಕ್ಕೆ ಸಹಕರಿಸಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಮನೆಯಲ್ಲಿ ಹೆಂಡತಿ ಇಲ್ಲದ ಸಮಯದಲ್ಲಿ ಈ ವಿದ್ಯಾರ್ಥಿನಿಯನ್ನ ಲೈಂಗಿಕ ದೌರ್ಜನಕ್ಕೆ ಬಳಸಿಕೊಂಡಿದ್ದಾನೆ. ದೌರ್ಜನ್ಯ ವೆಸಗಿದ ಶಿಕ್ಷಕನ ಹೆಂಡತಿ ಕೂಡ ಶಿಕ್ಷಕಿ.ಅವಳಿಗೆ ಈ ವಿಷಯ ಗೊತ್ತಾದಾಗಲೂ ಕೂಡ ಮೌನವಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.