Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡಿದೇ ಏಕಾಏಕಿ ಜೆಸಿಬಿ ತಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ತೆರವು ಕಾರ್ಯಾಚರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಬೆಳ್ಳಂಬೆಳಿಗ್ಗೆಯೇ ಜೆಸಿಬಿಯಿಂದ ದೇವಸ್ಥಾನದ ಮುಂಭಾಗವನ್ನು ತೆರವು ಮಾಡಿದ್ದು, ಜಿಲ್ಲಾಧಿಕಾರಿ ಆದೇಶದ ಮೇರೆಗೆ ತೆರವು ಮಾಡಲಾಗುತ್ತಿದೆ ಎಂದು ಗುತ್ತಿಗೆದಾರರು ಸ್ಥಳೀಯರಿಗೆ ಮಾಹಿತಿ ನೀಡಿರುವುದನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸೂಚನೆ ಇಲ್ಲದೇ ಏಕಾಏಕಿ ತೆರವು ಮಾಡಿದ್ದು, ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
ಒಟ್ಟಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಮಾಡುತ್ತಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ನೋಟಿಸ್ ನೀಡದೇ ತೆರವು ಮಾಡಲು ಮುಂದಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.