- Advertisement -
78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ.
ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಬಸವನಗುಡಿ ದೊಡ್ಡ ಗಣಪತಿ ದೇಗುಲ, ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಲೆಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಬೆಳಗ್ಗೆ 7 ಗಂಟೆಯಿಂದಲೇ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಇನ್ನು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಥರ್ಮಲ್ ಸ್ಕ್ರೀನಿಂಗ್ ಸೇರಿ ಹಲವು ಷರತ್ತುಗಳು ಈ ಸಮಯ ಅನ್ವಯ ಮಾಡಲಾಗಿದೆ.
- Advertisement -