ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಟೆನ್ಶನ್ ಶುರುವಾಗಿದೆ. ಈ ಹೊತ್ತಲ್ಲಿ ನವೆಂಬರ್ ಕ್ರಾಂತಿಗೆ ಕ್ಷಣಗಣನೆ ಎಂದು ಬಿಜೆಪಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. 1 ಕುರ್ಚಿಗೆ ನಾಲ್ಕು ನಾಯಕರು ಓಟ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಬಗ್ಗೆ, ಕಾಂಗ್ರೆಸ್ ಪಕ್ಷದಲ್ಲೇ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿವೆ. ಜೊತೆಗೆ ಅಹಿಂದ ನಾಯಕತ್ವದ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್ ಹೆಸರು ಕೇಳಿ ಬರ್ತಿದೆ. ಹೀಗಾಗಿ ಸಿದ್ದು, ಡಿಕೆಶಿ, ಜಾರಕಿಹೊಳಿ, ಪರಂ ನಾಲ್ವರು ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿರುವಂತೆ, ವಿಡಿಯೋದಲ್ಲಿ ತೋರಿಸಲಾಗಿದೆ. ಈ ಮಧ್ಯೆ ಬಿಜೆಪಿ ಈ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ರಣತಂತ್ರ ಹೆಣೆಯುತ್ತಿದೆ.
ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗುವ ಊಹಾಪೋಹಗಳಿಗೆ ‘ನವೆಂಬರ್ ಕ್ರಾಂತಿ’ ಎಂದು ಹೆಸರಿಟ್ಟು, ವಿಡಿಯೋವೊಂದನ್ನ ರಿಲೀಸ್ ಮಾಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿಯನ್ನು ಹಾಸ್ಯಮಯವಾಗಿ ಚಿತ್ರಿಸುವ ಮೂಲಕ, ಕಾಂಗ್ರೆಸ್‌ನ ಆಡಳಿತದ ಸಾಮರ್ಥ್ಯವನ್ನು ಬಿಜೆಪಿ ಪ್ರಶ್ನಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

