Hubli News: ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ಶತಸಿದ್ಧ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ಧರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಈ ಒಂದು ಪ್ರಕರಣದಿಂದ ಸಿದ್ಧರಾಮಯ್ಯನವರ ಗೌರವಯುತವಾಗಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದು ಅವರು ಭರವಸೆ ನೀಡಿದರು.
ಬಿಜೆಪಿಯವರಿಗೆ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ನೋಡಿ ತಳಮಳ ಸೃಷ್ಟಿಯಾಗಿದೆ. ಹೇಗಾದರೂ ಮಾಡಿ ಅಡ್ಡಗಾಲು ಹಾಕಬೇಕು ಎಂದು ಕುತಂತ್ರ ಮಾಡುತ್ತಿದ್ದಾರೆ. ಆದರೆ ಅವಧಿಪೂರ್ಣ ಸಿಎಂ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹೈ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.