Friday, November 28, 2025

Latest Posts

ಸೆಪ್ಟೆಂಬರ್‌ ಪೂರ್ತಿ ಭಯಂಕರ ಮಳೆ

- Advertisement -

ರಾಜ್ಯಾದ್ಯಂತ ಧಾರಾಕಾರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ ತಿಂಗಳು ಪೂರ್ತಿ ಮುಂದುವರೆಯುವ ಸಾಧ್ಯತೆ ಇದೆ. ಕಳೆದ 2 ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ 18ರ ರಾತ್ರಿ ಶುರುವಾದ ಮಳೆ ಬೆಳಗ್ಗೆಯಾದ್ರೂ ಬಿಟ್ಟಿರ್ಲಿಲ್ಲ. ಮುಂದಿನ 4 ದಿನಗಳು ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗೆ ಅಲರ್ಟ್‌ ಘೋಷಿಸಲಾಗಿದೆ.

ಸೆಪ್ಟೆಂಬರ್ 22ರವರೆಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್‌, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ತುಮಕೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಸದ್ಯ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ, ಭಾರೀ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ, ಸರ್ಕೂಲೇಶನ್‌ 5.8 ಕಿಲೋ ಮೀಟರ್‌ ಎತ್ತರದಲ್ಲಿ ಇದೆ. ತೆಲಂಗಾಣ ಮತ್ತು ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ, 3.1 ಕಿಲೋ ಮೀಟರ್‌ ಎತ್ತರದಲ್ಲಿ ಸರ್ಕೂಲೇಶನ್‌ ಇದೆ. ಇದರ ಪ್ರಭಾವದಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ, ಸೆಪ್ಟೆಂಬರ್‌ 18ರಿಂದ 22ರವರೆಗೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಭಾರತಕ್ಕಿಂತ ಉತ್ತರ ಭಾರತದಲ್ಲಿ ವರುಣಾರ್ಭಟ ಜೋರಾಗಿದೆ. ಉತ್ತರಾಖಂಡದಲ್ಲೂ ಭೀಕರ ಮಳೆಯಾಗ್ತಿದ್ದು, ಪ್ರವಾಹ ಮತ್ತು ಭೂಕುಸಿತಗಳ ಪ್ರಮಾಣ ಹೆಚ್ಚಾಗಿದೆ. ಇದುವರೆಗೆ 14 ಮಂದಿ ಕಾಣೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪ್ರವಾಹಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

- Advertisement -

Latest Posts

Don't Miss