Sunday, June 1, 2025

Latest Posts

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ: ಮೂವರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -

National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಅಗರ್ತಲಾದಿಂದ ನ್ಯೂ ಜಲ್ಪೈಗುರಿಗೆ ಹೊರಟಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು ರಂಗಪಾಣಿ ನಿಲ್ದಾಣದಲ್ಲಿ ನಿಂತಿತ್ತು ಎಂದು ಹೇಳಲಾಗಿದೆ. ಅಷ್ಟರಲ್ಲಿ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಗಾರ್ಡ್ ಬೋಗಿ, ಎಸ್​ಎಲ್​ಆರ್ ಹಾಗೂ ಜನರಲ್ ಬೋಗಿಗೆ ಭಾರಿ ಹಾನಿಯಾಗಿದೆ. ಅಪಘಾತದ ರಭಸಕ್ಕೆ ಮೂರು ಬೋಗಿಗಳು ಹಳಿ ತಪ್ಪಿವೆ.

ಗಾಯಾಳುಗಳ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಸ್ಥಳಕ್ಕೆ ಪರಿಹಾರದ ರೈಲನ್ನೂ ಕಳುಹಿಸಲಾಗುತ್ತಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೀಕರ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಸರಕು ಸಾಗಣೆ ರೈಲಿನಿಂದ ಡಿಕ್ಕಿಯಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ರಕ್ಷಣಾ ತಂಡಗಳನ್ನು ಸಹಾಯಕ್ಕಾಗಿ ಕಳುಹಿಸಲಾಗಿದೆ. ಪ್ರಮಾಣಿಕರ ರಕ್ಷಣೆಗೆ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss