ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಯೋಜನೆ ರೂಪಸಿದ್ದಾರೆ ಎಂದು ಎಚ್ಚರಿಸಿದೆ.
ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370 ವಿಧಿ ರದ್ದು ಮಾಡಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರರು ಸಂಚು ಹೂಡಿದ್ದು, ಕಠಿಣ ಭದ್ರತೆ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.
ಮತ್ತೊಂದೆಡೆ ಪಾಕ್ ಸೇನೆಯ ಕದನ ವಿರಾಮ ಉಲ್ಲಂಘನೆ ಮುಂದುವರಿದಿದ್ದು, ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಕಿರ್ನಿ ಸೆಕ್ಟಾರ್ ನಲ್ಲಿ ಪಾಕ್ ರೇಂಜರ್ಸ್ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ಇದಕ್ಕೆ ತಕ್ಕ ಉತ್ತರ ನೀಡಿದೆ.