www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗಿದ್ದು ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಶಾರ್ದೂಲ್ ಠಾಕೂರ್ ಬರುವುದು ಅನುಮಾನ ಎನ್ನುತ್ತಿದ್ದಾರೆ.
ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಟೆಸ್ಟ್ ಪಂದ್ಯಕ್ಕೆ ಅಚ್ಚರಿಯ ಆಯ್ಕೆಯಾಗಿದ್ದರು. ಶಾರ್ದೂಲ್ ಆಯ್ಕೆಯನ್ನು ಬಹುತೇಕರು ನಿರೀಕ್ಷಿಸಿರಲಿಲ್ಲ. ಆಡುವ ಅವಕಾಶವನ್ನು ಪಡೆದ ಠಾಕೂರ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದಾರೆ. 41 ರನ್‌ಗಳನ್ನು ನೀಡಿ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ 37 ರನ್‌ಗಳನ್ನು ನೀಡಿ ಎರಡು ವಿಕೆಟ್ ಪಡೆದುಕೊಂಡರು. ಈ ಮೂಲಕ ಅನುಭವಿಗಳಾದ ಜಸ್ಪ್ರೀತ್ ಬೂಮ್ರಾ ಹಾಘೂ ಮೊಹಮ್ಮದ್ ಶಮಿಗೆ ಅದ್ಭುತವಾದ ಬೆಂಬಲವನ್ನು ನೀಡುವಲ್ಲಿ ಯಶಸ್ವಿಯಾದರು.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಟೆಸ್ಟ್‌ಗೆ ಶಾರ್ದೂಲ್ ಠಾಕೂರ್ ಆಡಲು ಅಸಮರ್ಥರಾದರೆ ಆಸ್ಥಾನ ಭಾರತದ ಅನುಭವಿ ಸ್ಪಿನ್ನರ್ ಆರ್ ಆಶ್ವಿನ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.