Festival news
ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು.
ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು.
ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಎಲ್ಲಾ ಶಿವನ ದೇವಾಲಯಗಳಲ್ಲಿ ಪವಿತ್ರ ಗಂಗಾಜಲದಿಂದ ಶಿವನಿಗೆ ಅಭಿಷೇಕ ಮಾಡಾಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕಿಗೆ ಐದು ಗಂಗಾಜಲ ಕ್ಯಾನ್ ಗಳನ್ನು ತಹಶೀಲ್ದಾರ್ ರವರ ಸಮಕ್ಷಮದಲ್ಲಿ ವಿತರಣೆ ಮಾಡಿದ್ದೇವೆ. ಗಂಗಾಜಲವನ್ನು ಶಿವನ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡಲಾಗುವುದು ಎಂದರು.
ಉಪವಿಭಾಗಧಿಕಾರಿ ಎಸ್.ಹೆಚ್ ಕೀರ್ತನ, ತಹಶೀಲ್ದಾರ್ ಕುಞ ಅಹಮ್ಮದ್, ಧಾರ್ಮಿಕ ದತ್ತಿ ತಹಶೀಲ್ದಾರ್ ಎಂ.ಉಮಾ, ಕಾರ್ಯನಿರ್ವಾಹಕ ಅಧಿಕಾರಿ ಮಂಜೇಶ್, ರಮ್ಯಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು