2 ದಿನಗಳಿಂದ ಬಂದ್ ಆಗಿದ್ದ ಬಿಗ್‌ಬಾಸ್ ಮನೆ ರೀ ಓಪನ್ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ, ಮನೆಗೆ ಹಾಕಿದ್ದ ಬೀಗಮುದ್ರೆಯನ್ನು ತೆರವುಗೊಳಿಸಿದೆ. ಮಧ್ಯರಾತ್ರಿ 2.42ರ ಸುಮಾರಿಗೆ ಕೇವಲ ಸ್ಟುಡಿಯೋಸ್‌ಗೆ ಸಂಪರ್ಕ ಕಲ್ಪಿಸುವ ಸಿ ಗೇಟ್ ಮಾತ್ರ ಓಪನ್ ಮಾಡಲಾಗಿದೆ. ಜೊತೆಗೆ ಚಿತ್ರೀಕರಣಕ್ಕೂ ಅವಕಾಶ ಮಾಡಿಕೊಟ್ಟಿದೆ.
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಡಿಕೆಶಿ ಪೋಸ್ಟ್ ಮಾಡಿದ್ದು, ನಟ ಕಿಚ್ಚ ಸುದೀಪ್ ಟ್ವೀಟ್ ಮೂಲಕವೇ ಧನ್ಯವಾದ ತಿಳಿಸಿದ್ದಾರೆ. ಬಿಡದಿಯ ಜಾಲಿವುಡ್ ಸೀಲ್ ತೆಗೆಯುವಂತೆ, ನಾನು ಬೆಂಗಳೂರು ದಕ್ಷಿಣ ಜಿಲ್ಲೆಯ ಉಪ ಆಯುಕ್ತರಿಗೆ ನಿರ್ದೇಶನ ಕೊಟ್ಟಿದ್ದೇನೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ, ಆಗಿರುವ ಉಲ್ಲಂಘನೆಗಳನ್ನು ಸರಿಪಡಿಸಿಕೊಳ್ಳಲು ಸಮಯ ನೀಡಲಾಗುವುದು. ಕನ್ನಡ ಮನರಂಜನಾ ಉದ್ಯಮವನ್ನು ಬೆಂಬಲಿಸಲು ನಾನು ಬದ್ಧನಾಗಿರುತ್ತೇನೆಂದು ಪೋಸ್ಟ್ ಮಾಡಿದ್ದಾರೆ.
ಇತ್ತ, ನಮನ್ನ ಬೆಂಬಲಿಸಿದ್ದಕ್ಕೆ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಅಂತಾ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್‌ಬಾಸ್ ಕನ್ನಡ ಭಾಗಿಯಾಗಿಲ್ಲ ಮತ್ತು ಭಾಗವಾಗಿರಲಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ, ಸಂಬಂಧಿಸಿದ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಡಿಸಿಎಂ ಅವರಿಗೆ ನಾನು ಪ್ರಾಮಾಣಿಕವಾಗಿ ಪ್ರಶಂಸೆ ವ್ಯಕ್ತಪಡಿಸುತ್ತೇನೆಂದು, ಪೋಸ್ಟ್ ಶೇರ್ ಮಾಡಿದ್ದಾರೆ.
ಒಟ್ನಲ್ಲಿ ಭಾರೀ ಹೈಡ್ರಾಮದೊಂದಿಗೆ ಕನ್ನಡ ಬಿಗ್‌ಬಾಸ್ ಮತ್ತೆ ಶುರುವಾಗಿದೆ.