Monday, October 6, 2025

Latest Posts

ಬಿಜೆಪಿ ಸರ್ಕಾರ ‘ಕಣ್ಗಾವಲು ಪರಿಸ್ಥಿತಿ’ ನಿರ್ಮಾಣ ಮಾಡುತ್ತಿದೆ

- Advertisement -

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.

ದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ‘ಕಣ್ಗಾವಲು ಪರಿಸ್ಥಿತಿ’ ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ ಸಮಯ ಬಂದಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

‘ಬಿಜೆಪಿ ಪ್ರಜಾಪ್ರಭುತ್ವವನ್ನು ಪ್ರೀತಿಸುತ್ತಿದ್ದರೆ ಅದು ದೇಶದ ಒಕ್ಕೂಟ ವ್ಯವಸ್ಥೆಯನ್ನು ಉರುಳಿಸುವ ಯತ್ನ ಮಾಡುತ್ತಿರಲಿಲ್ಲ. ಪ್ರತಿಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳಲ್ಲಿ ಬಿಜೆಪಿ ವಿರೋಧಿ ರಂಗ ಸ್ಥಾಪಿಸಬೇಕೆಂದು ನಾನು ಒತ್ತಾಯಿಸುತ್ತೇನೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಗ್ಗೂಡಬೇಕು.

- Advertisement -

Latest Posts

Don't Miss