Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ.
ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ ವಿಷಯ. ಖಂಡನೀಯ. ಜನಿವಾರ ಧರಿಸುವುದು ಸಾಮಾನ್ಯ ವಿಷಯವಲ್ಲ. ಇದೊಂದು ಧಾರ್ಮಿಕ ನಂಬಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಮ್ ಗಾರ್ಡ್‌ನನ್ನು ಕೆಲಸದಿಂದ ತೆಗೆದುಹಾಕಿ ಸರ್ಕಾರ ಕೈ ತೊಳೆದುಕೊಂಡಿದೆ. ಆದರೆ ಈ ಪ್ರಕರಣವನ್ನು ಇಲ್ಲಿಗೆ ಬಿಡಬಾರದು. ಇದನ್ನು ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಹೇಳಿದ್ದಾರೆ.
ಅಲ್ಲದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೋಶಿ, ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಕೇಂದ್ರ ಕಾಂಗ್ರೆಸ್‌ಗಾಗಲಿ, ರಾಜ್ಯ ಕಾಂಗ್ರೆಸ್‌ಗಾಗಿ ಜನರ ಹಿತ ಮುಖ್ಯವಾಗಿಲ್ಲ, ಅವರಿಗೆ ಬರೀ ವೋಟ್ ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.