Friday, November 21, 2025

Latest Posts

ಗುಣಮಟ್ಟ ಪರೀಕ್ಷೆಯಲ್ಲಿ ಸಿರಪ್‌ಗಳು ಫೇಲ್!

- Advertisement -

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ.

ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌ ಮತ್ತು ಪುದುಚೆರಿಯ ಎಥಿಡ್ರಸ್ ಸಂಶೋಧನಾ ಪ್ರಯೋಗಾಲಯ ಉತ್ಪಾದಿಸುವ ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ನ, ಸಿಎಸ್‌ಎಲ್‌-129ನೇ ಬ್ಯಾಚ್‌ಗಳು ನಿಗದಿತ ಮಾನದಂಡಗಳನ್ನು ತಲುಪುವಲ್ಲಿ ವಿಫಲವಾಗಿವೆ. ಇವುಗಳನ್ನು ಹಿಂಪಡೆದು ತಯಾರಿಕಾ ಘಟಕಗಳಲ್ಲಿ ಪರಿಶೀಲನೆ ನಡೆಸಬೇಕು ಹಾಗೂ ತಯಾರಕರ ವಿರುದ್ಧ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸದ್ಯ ಸೂಚಿಸಲಾಗಿದೆ. ಹೀಗಂತ ‘ಸೌತ್‌ಫಸ್ಟ್‌’ ಎಂಬ ಸುದ್ದಿ ವರದಿ ಪ್ರಕಟಿಸಿದೆ.

ಎಲ್‌ವಿ ಲೈಫ್‌ ಸೈನ್ಸ್‌ನ ಸಿರಪ್‌ ಅನ್ನು ಬ್ರಾಂಕೈಟಿಸ್, ಅಸ್ತಮಾ ಮತ್ತು ಸಿಒಪಿಡಿಯಂತಹ ಉಸಿರಾಟಕ್ಕೆ ಸಂಬಂಧಿಸಿದ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ ಅನ್ನು ಕಫ ಮತ್ತು ಉಸಿರಾಟದ ತೊಂದರೆಗಳೊಂದಿಗೆ ಬರುವ ಕೆಮ್ಮನ್ನು ನಿವಾರಿಸಲು ತಯಾರಿಸಲಾಗಿದೆ. ಆದರೆ ಗುಣಮಟ್ಟ ಪರೀಕ್ಷೆಯಲ್ಲಿ ಈ ಎರಡೂ ಔಷಧಗಳು ವಿಫಲವಾಗಿವೆ ಎಂದು ಸಿಡಿಎಸ್‌ಸಿಒ ವರದಿ ಹೇಳಿದೆ ಎಂದು ಗೊತ್ತಾಗಿದೆ.

- Advertisement -

Latest Posts

Don't Miss