Tuesday, October 28, 2025

Latest Posts

ಡಿಕೆ ವಿರುದ್ಧ ಸಿದ್ದು ಪ್ಲಾನ್‌ ವರ್ಕೌಟ್‌ ಆಗುತ್ತಾ?

- Advertisement -

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್‌ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ.

ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಸಂಪುಟ ಪುನಾರಚನೆ ಅಂತಿಮಗೊಳಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಹಿಂದ ನಾಯಕನ ಬದಲಿಗೆ, ಲಿಂಗಾಯತ ಮುಖಂಡ ಅಥವಾ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೆಸರನ್ನು ಪ್ರಸ್ತಾಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಿದ್ದರಾಮಯ್ಯ ಆಪ್ತವಾಗಿದ್ದಾರೆ. ನವೆಂಬರ್ 20 ರಂದು ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುವ ಹಿನ್ನೆಲೆ, ಅಧಿಕಾರ ಹಂಚಿಕೆ ಒಪ್ಪಂದ ನೆನಪಿಸಲು ಡಿಕೆಶಿ ಪ್ರಯತ್ನಿಸುತ್ತಿದ್ದಾರೆ. ಶಿವಕುಮಾರ್ ಒತ್ತಡ ತಂತ್ರಗಳಿಗೆ ಹೈಕಮಾಂಡ್ ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲಎಂದು, ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್‌ ತೀರ್ಮಾನಿಸಿದ್ರೆ ಅನ್ನೋ ಪದ ಬಳಸಿದ್ದಾರೆ. 5 ವರ್ಷ ನಾನೇ ಸಿಎಂ ಎಂದು ಹೇಳ್ತಿದ್ದವರು, ಇದೀಗ ಹೈಕಮಾಂಡ್‌ನತ್ತ ಬೊಟ್ಟು ಮಾಡಿ ತೋರಿಸಿದ್ದಾರೆ. ಇದು ಭಾರೀ ಬದಲಾವಣೆಯ ಸುಳಿವು ನೀಡ್ತಿದೆ ಎನ್ನಲಾಗಿದೆ.

- Advertisement -

Latest Posts

Don't Miss