Hubballi Political News: ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಪ ಸದಸ್ಯ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು ಹೇಳಿದ ಹೇಳಿಕೆ ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ ಹಿತರಕ್ಷಣೆ ಮಾಡುತ್ತೀನಿ ಅಂತ ಹೇಳೋದು ಸಹಜ. ಹೀಗಾಗಿ ಅಂತಹ ಸಂದರ್ಭದಲ್ಲಿ ನಿಮ್ಮ ಹಿತ ರಕ್ಷಣೆ ಮಾಡುವುದಿಲ್ಲ ಅಂತ ಹೇಳ್ತಾರೇನು? ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ. ಅದನ್ನು ಬಿಟ್ಟು ಬಿಡಿ ಎಂದರು.
ಸಿದ್ದರಾಮಯ್ಯ ಅವರೇ ಸಮರ್ಥರಿದ್ದಾರೆ. ಅವರೇ ಅದರಲ್ಲಿ ಉತ್ತರ ಕೊಡ್ತಾರೆ ಎಂದು ಹೇಳಿದರು. ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ಚರ್ಚೆ ಆಗಲೇಬೇಕು. ವಿರೋಧ ಪಕ್ಷದವರ ಮೇಲೆ ಕೂಡ ಸಾಕಷ್ಟು ಜವಾಬ್ದಾರಿ ಇದೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ಧ್ವನಿ ಎತ್ತಿದರೆ ಖಂಡಿತವಾಗಿ ಚರ್ಚೆ ಆಗುತ್ತದೆ ಎಂದರು.
ರಾಜ್ಯಾಧ್ಯಕ್ಷ ನೇಮಕ ನಂತರ ಯತ್ನಾಳ್ ಅಸಮಾಧಾನ ವಿಚಾರವಾಗಿ ಮಾತನಾಡಿ, ಅವರವರೇ ಅದರ ಬಗ್ಗೆ ಮಾತನಾಡಬೇಕು. ನಾನು ಅದರ ಬಗ್ಗೆ ಏನು ಮಾತನಾಡಲಿ? ನಾನು ಹಿಂದೇನು ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೇ ಹೇಳುವುದರಲ್ಲಿ ಅರ್ಥವಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್ ಪರೋಕ್ಷ ಅಸಮಾಧಾನ..!
ಸಿಎಂ ಹೇಳಿದ್ದು, ನೂರಕ್ಕೆ ನೂರು ಸತ್ಯ, ಇಲ್ಲಿರುವ ಮುಸ್ಲಿಂಮರು ಪಾಕಿಸ್ತಾನದವರಾ..?: ಸಚಿವ ತಿಮ್ಮಾಪೂರ
ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ