‘ಕೇಂದ್ರ ಸರಕಾರದ ನೆರವು ಪಡೆದು ಈ ಬಗ್ಗೆ ಕಾರ್ಯಾಚರಣೆ ನಡೆಸಲು ಕಾಂಗ್ರೆಸ್ ಮಿನಾಮೇಷ ಎಣಿಸಬಾರದು’

Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು. ರಾಜ್ಯ ಕಾಂಗ್ರೆಸ್ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು. ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ಹೇಳಿದ್ದಾರೆ.

‘ವಿಧಾನಸಭಾ ಚುನಾವಣೆ ಫಲಿತಾಂಶ ‌ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ’

ಭ್ರೂಣ ಹತ್ಯೆ ವಿಚಾರ: ಪೊಲೀಸ್ ಇಲಾಖೆ, ನಮ್ಮ ಇಲಾಖೆ ಕೈ ಜೋಡಿಸಿ ತನಿಖೆ ಮಾಡಿಸುತ್ತೇವೆ: ಸಚಿವ ಗುಂಡೂರಾವ್

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

About The Author