Tuesday, April 15, 2025

Latest Posts

ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾನಕ್ಕೆ ಮಂಜೂರು

- Advertisement -

www.karnatakatv.net ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಬೆಳಗಾವಿಯಲ್ಲಿ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು ಜಮೀನು ಮಂಜೂರಾಗಿರುತ್ತದೆ. 16.43 ಕೋಟಿ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಂಸ್ಥೆಗೆ ವಹಿಸಲು ಸಚಿವ ಸಂಪುಟ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.

- Advertisement -

Latest Posts

Don't Miss