Sunday, July 6, 2025

Latest Posts

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

- Advertisement -

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮಹೇಶ್ ಟೆಂಗಿನಕಾಯಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಮಹೇಶ್, ಮೃತರ ಕುಟುಂಬಕ್ಕೆ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು. ಮೃತರೆಲ್ಲರೂ ಕಡು ಬಡವರಿದ್ದಾರೆ. ಐದು ಲಕ್ಷ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ. ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿನ ಪರಿಹಾರ ನೀಡಲಿ ಎಂದು ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ.

- Advertisement -

Latest Posts

Don't Miss