Political News: ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಸಂದರ್ಭದಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ, ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ, ಡಿಕೆಶಿ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಆ ಬೇಡಿಕೆಗಳು ಹೀಗಿದೆ..
ಮೊದಲನೇಯ ಬೇಡಿಕೆ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು, ರೂಪಿಸಿರುವ 60 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಿಸಲು, 30 ಸಾವಿರ ಕೋಟಿ ವೆಚ್ಚವಾಗಲಿದ್ದು, ಅದನ್ನು ಕೇಂದ್ರ ಸರ್ಕಾರ ಅನುದಾನ ನೀಡಬೇಕು.
ಎರಡನೇಯ ಬೇಡಿಕೆ: ನಮ್ಮ ಮೇಟ್ರೋದ ಮೂರನೇ ಹಂತದ ಯೋಜನೆಯ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಬೇಕು. 37 ಕಿಲೋ ಮೀಟರ್ ಉದ್ದದ 3ನೇ ಎ ಹಂತವು ವಿಸ್ತ್ರತ ಯೋಜನಾ ಹಂತದಲ್ಲಿದ್ದು, ಕೇಂದ್ರ ಸರ್ಕಾರ ನೆರವು ಕೊಡಬೇಕು.
ಮೂರನೇಯ ಬೇಡಿಕೆ: ಬೆಂಗಳೂರಿನಲ್ಲಿ ಪ್ರವಾಹ ತಡೆಗಟ್ಟಲು, 3 ಸಾವಿರ ಕೋಟಿಯ ಯೋಜನೆ ರೂಪಿಸಿ, ಆರ್ಥಿಕ ಸಹಕಾರಕ್ಕಾಗಿ ವಿಶ್ವಬ್ಯಾಂಕ್‌ಗೆ ಸಲ್ಲಿಸಲಾಗಿದೆ. ಈ ಪ್ರಸ್ತಾವಕ್ಕೆ ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವಾಲಯ ಅನುಮೋದನೆ ನೀಡಬೇಕು.
ನಾಲ್ಕನೇಯ ಬೇಡಿಕೆ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಇದನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ಕೊಡಬೇಕು.
ಇವಿಷ್ಟು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇಟ್ಟ ಬೇಡಿಕೆಗಳು..
ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ನಿನ್ನೆ ದಿಲ್ಲಿಯಲ್ಲಿ ಭೇಟಿಯಾಗಿ ಬೆಂಗಳೂರು ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದೆ, ಅದರ ಸಂಪೂರ್ಣ ವಿವರ ಇಲ್ಲಿದೆ. pic.twitter.com/GszMtYcFsu
— DK Shivakumar (@DKShivakumar) December 21, 2023
ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಧನಕರ್‌ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ