ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನಿಯಮಾವಳಿ ಗಾಳಿಗೆ ತೂರಿ ಸ್ಥಳೀಯ ಶಾಸಕರ ಹೆಸರನ್ನೇ ಕೈಬಿಟ್ಟಿರುವುದು ಚರ್ಚಾ ವಿಷಯವಾಗಿದೆ.
ಆಮಂತ್ರಣ ಪತ್ರಿಕೆಯಲ್ಲಿತಹಶೀಲ್ದಾರ ವೀರೇಶ ಮುಳುಗುಂದಮಠ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಸಾವಂತ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ಅವರ ಹೆಸರಗಳನ್ನು ಮಾತ್ರ ಮುಂದ್ರಣ ಮಾಡಲಾಗಿದೆ. ಪತ್ರಿಕೆಯಲ್ಲಿ ಮುಖ್ಯವಾಗಿ ಶಾಸಕರ ಹೆಸರು ಕೈ ಬಿಟ್ಟಿರುವುದಕ್ಕೆ ಲಾಡ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.