Monday, May 5, 2025

Latest Posts

‘ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು’

- Advertisement -

Political News: ಸಚಿವ ಶಿವಾನಂದ ಪಾಟೀಲ್‌ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಚಿವ ಶ್ರೀ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು. ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

Latest Posts

Don't Miss