ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ ಜಡ್ಜ್ ಸೂಚಿಸಿದ್ದಾರೆ.
2025ರ ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆ ಸಮೀಪ ಬಿಕ್ಲು ಶಿವ ಕೊಲೆಯಾಗಿತ್ತು. ರಾತ್ರಿ ಸುಮಾರು 8 ಗಂಟೆ ವೇಳೆಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಪ್ರಕರಣ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿ ಬಸವರಾಜ್ ಪಾತ್ರ ಇದೆ ಎಂಬ ಆರೋಪ ಇದೆ. ಹೀಗಾಗಿ ಪ್ರಕರಣದಲ್ಲಿ 5ನೇ ಆರೋಪಿಯಾನ್ನಾಗಿ ಮಾಡಲಾಗಿದೆ. ಈವರೆಗೆ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.




