Tuesday, October 14, 2025

Latest Posts

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

- Advertisement -

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ರಾಜ್ಯದಲ್ಲಿ ಅದರಲ್ಲಿನ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಅಪ್ರಾಪ್ತರ ನಿಶ್ಚಿತಾರ್ಥ, ವಿವಾಹಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.

ಇದನ್ನೂ ಓದಿ : ಆನೆಗಳಿಗೂ ಟೂರ್ ಭಾಗ್ಯ – ವಿಮಾನದಲ್ಲಿ ಟ್ರಿಪ್!

ರಾಜ್ಯದಲ್ಲಿದ್ದ ಈವರೆಗಿನ ಕಾಯ್ದೆಯಲ್ಲಿ ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧ ಎಂದು ತಿಳಿಸಲಾಗಿದೆ. ಬಾಲ್ಯ ವಿವಾಹ ಮಾಡಿದ ವಧು, ವರರ ಕುಟುಂಬದವರು ಶಿಕ್ಷೆಗೆ ಗುರಿಯಾಗುತ್ತಾರೆ. ಇದೀಗ ಅಂತಹ ವಿವಾಹಗಳನ್ನು ನಿಶ್ಚಯ ಮಾಡುವವರನ್ನೂ ಶಿಕ್ಷೆಗೆ ಒಳಪಡಿಸಲು ಅವಕಾಶ ನೀಡಿ ಬಾಲ್ಯವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ವಿಧೇಯಕ-2025 ರೂಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಹೆಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಡಿಸಿದ ಈ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ನಿಶ್ಚಿತಾರ್ಥ ಪ್ರಕ್ರಿಯೆಯಲ್ಲಿ ಭಾಗಿಯಾದವರು, ಸಮಾರಂಭಕ್ಕೆ ಬಂದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಮುಂಬರುವ ಮುಂಗಾರು ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಿ ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

- Advertisement -

Latest Posts

Don't Miss