Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ನಡೆಯುತ್ತಿರೋ ಬೆಳವಣಿಗೆಗಳಿಂದ ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಕೇವಲ ಅಧಿಕಾರ ಹಂಚಿಕೆ ವಿಚಾರದಲ್ಲೇ ಕಾಂಗ್ರೆಸ್ ಕಾಲಹರಣ ಮಾಡುತ್ತಿದೆ ಎಂದು ಟೆಂಗಿನಕಾಯಿ ಆರೋಪಿಸಿದ್ದಾರೆ.
ಇದರಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗುತ್ತಿದೆ. ಗ್ಯಾರಂಟಿ ವಿಚಾರದಲ್ಲೂ ಸಹ ಜನ ಸರ್ಕಾರದ ನಡೆ ಬಗ್ಗೆ ಮಾತನಾಡುವಂತಾಗಿದೆ. ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ನಡೆ ಬಗ್ಗೆ ರಾಜ್ಯದ ಜನತೆಗೆ ಬೇಸರ ತರಿಸಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.